ರಾಮಕುಂಜ: ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಮಾ.29ರಿಂದ ಎ.3ರ ತನಕ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಧಾರ್ಮಿಕ ಪರಿಷತ್ನ ಸದಸ್ಯರಾದ ಲಕ್ಷ್ಮೀಶ ಗಬಲಡ್ಕ ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಜಾತ್ರಾ ಮಹೋತ್ಸವ ಯಶಸ್ವಿಯಾಗಲು ಊರಿನ ಭಕ್ತರ ಸಹಕಾರ ಅತೀ ಅಗತ್ಯವಾಗಿದೆ. ಕ್ಷೇತ್ರದ ಅಭಿವೃದ್ಧಿಯಲ್ಲೂ ಊರಿನ ಭಕ್ತರ ಪಾಲ್ಗೊಳ್ಳುವಿಕೆ ಇರಬೇಕೆಂದು ಹೇಳಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ನೀರಜ್ಕುಮಾರ್ ರೈ ಅರುವಾರ ಬಾಳಿಕೆ ಸ್ವಾಗತಿಸಿ ಮಾತನಾಡಿ, ಜಾತ್ರಾ ಮಹೋತ್ಸವಕ್ಕೆ ಎಲ್ಲರ ಸಹಕಾರ ಕೋರಿದರು. ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ವ್ಯವಸ್ಥಾಪನಾ ಸಮಿತಿ ಸದಸ್ಯರೂ, ದೇವಸ್ಥಾನದ ಅರ್ಚಕರಾದ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ, ಸದಸ್ಯರಾದ ಯತೀಶ್ ಗುಂಡಿಜೆ, ಸುನೀತ್ರಾಜ್ ಶೆಟ್ಟಿ, ಸಂಜೀವ ಸುದೆಂಗಳ, ಸುಜಾತ ಜೆ.ಶೆಟ್ಟಿ, ಉತ್ಸವ ಸಮಿತಿಯ ಅಧ್ಯಕ್ಷರಾದ ಧರ್ಣಪ್ಪ ಗೌಡ ಕೋರಿಕ್ಕಾರು, ಉಪಾಧ್ಯಕ್ಷರಾದ ಪಾಂಡೇಲುಗುತ್ತು ಚಂದ್ರಹಾಸ ರೈ, ಮೋಹನದಾಸ್ ಶೆಟ್ಟಿ ಬಡಿಲ, ಮುರಳಿಕೃಷ್ಣ ಬಡಿಲ, ಕಾರ್ಯದರ್ಶಿ ವಿನೋದ್ಕುಮಾರ್ ಪಲ್ಲಡ್ಕ, ಶಾಂತರಾಮ ಬೇಂಗದಪಡ್ಪು, ದಾಮೋದರ ಪುಣ್ಕೆದಡಿ, ಯದುಶ್ರೀ ಆನೆಗುಂಡಿ, ವಿಶ್ವನಾಥ ಪುತ್ಯೆ, ಜಗನ್ನಾಥ ಶೆಟ್ಟಿ ಕಾರೆಗುಡ್ಡೆ, ಸಂಜೀವ ಪಲ್ಲಡ್ಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.