ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್‌ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯ 2024-25ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ಗ್ರಾಮಸಭೆ ಮಾ.13ರಂದು ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.
ಸಮಾಜ ಕಲ್ಯಾಣ ಇಲಾಖೆ ಪುತ್ತೂರು ಇಲ್ಲಿನ ನಿಲಯ ಮೇಲ್ವಿಚಾರಕಿ ಪ್ರೇಮಲತಾ ಎಂ.ಸಭೆಯ ಅಧ್ಯಕ್ಷತೆ ವಹಿಸಿದ್ದರು.ಬೆಳ್ತಂಗಡಿ ತಾಲೂಕು ಸಾಮಾಜಿಕ ಪರಿಶೋಧನೆಯ ಕಾರ್ಯಕ್ರಮ ವ್ಯವಸ್ಥಾಪಕ ಸೂರ್ಯಕಾಂತ್ ಎಕಲಾರ್ ಅವರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯ ಉದ್ದೇಶ ಹಾಗೂ ಸಾಮಾಜಿಕ ಪರಿಶೋಧನೆಯ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಉಪಾಧ್ಯಕ್ಷೆ ರೇಷ್ಮಾಶಶಿ, ಸದಸ್ಯರಾದ ಪ್ರಕಾಶ್, ಜಯಾನಂದ ಬಂಟ್ರಿಯಾಲ್, ಉಷಾ ಒ.ಕೆ., ರವಿಪ್ರಸಾದ್ ಶೆಟ್ಟಿ, ಮಹಮ್ಮದ್ ಇಕ್ಬಾಲ್, ಅಬ್ದುಲ್ ಜಬ್ಬಾರ್, ಆನಂದ ಪಿಲವೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾಮಾಜಿಕ ಪರಿಶೋಧನೆಯ ತಂಡದ ಸಿಬ್ಬಂದಿಗಳು ವರದಿ ಮಂಡಿಸಿದರು. ಪಿಡಿಒ ಮೋಹನ್‌ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ಅಂಗು ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದರು. ಸಭೆಯಲ್ಲಿ ಉದ್ಯೋಗ ಖಾತರಿ ಯೋಜನೆ ಫಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.