ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.20 ನೇ ಗುರುವಾರ ಬೆಳಿಗ್ಗೆ 10.30 ಕ್ಕೆ ಪುಣಚ ಗ್ರಾಪಂ ಸುವರ್ಣ ಸೌಧ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷ ಬೇಬಿ ಯಾನೆ ಯಶೋಧಾರವರ ಅಧ್ಯಕ್ಷತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಮಾರ್ಗದರ್ಶನದಲ್ಲಿ ನಡೆಯಲಿದ್ದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರಕಾರದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸುವಂತೆ ಹಾಗೇ ಗ್ರಾಮದ ಅಭಿವೃದ್ದಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿಸುವಂತೆ ಗ್ರಾಪಂ ಅಧ್ಯಕ್ಷ ಬೇಬಿ ಯಾನೆ ಯಾಶೋಧಾ, ಉಪಾಧ್ಯಕ್ಷರಾದ ಮಹೇಶ್ ಶೆಟ್ಟಿ ಬೈಲುಗುತ್ತು, ಪಂಚಾಯತ್ ಅಭಿವೃದ್ದಿ ಅಧಿಕಾರಿ ರವಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಪಾರ್ವತಿ ಹಾಗೂ ಪಂಚಾಯತ್‌ನ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.