ಪುತ್ತೂರು: ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು ಹಾನಿಯಾದ ಘಟನೆ ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನಲ್ಲಿ ಭಾನುವಾರ ಸಂಜೆ ನಡೆದಿದೆ.
ಮೋಹನ್ ಭಂಡಾರಿ ಎಂಬವರ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು ಹಾನಿಯಾಗಿದ್ದು, ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಮನೆ ಪಕ್ಕದಲ್ಲೇ ಇದ್ದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡ ತಕ್ಷಣ ಸ್ಥಳಕ್ಕಾಗಮಿಸಿದ ನೆರೆಮನೆಯವರು ದನಗಳನ್ನು ಹೊರ ಕರೆದೊಯ್ದಿದ್ದಾರೆ.