ಪುತ್ತೂರು: ಮಾ.21ರಿಂದ 27 ರವರೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯ ವಿಜಯಪುರ ಇಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಭಾಗವಹಿಸಲು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಸ್ವಯಂಸೇವಕಿ ಕುಶಿತಾ ದ್ವಿತೀಯ ಬಿ.ಸಿ.ಎ ಇವರು ಆಯ್ಕೆಯಾಗಿದ್ದಾರೆ.
ಇವರಿಗೆ ಸಂಸ್ಥೆಯ ಸಂಚಾಲಕರು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಭೋದಕ-ಭೋದಕೇತರ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ. ಇವರಿಗೆ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ನಿರಂಜನ್ ವಿ ಇವರು ಮಾರ್ಗದರ್ಶನ ನೀಡಿರುತ್ತಾರೆ.