ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ 26 ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದ ಚಾಂಪಿಯನ್ಶಿಪ್ನಲ್ಲಿ ರನ್ನರ್ ಅಪ್ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ.
ಶಿವಮೊಗ್ಗದ ಜವಾಹರ್ಲಾಲ್ ನೆಹರೂ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಮಾರ್ಚ್ 15 ರಿಂದ 18ರ ವರೆಗೆ ನಡೆದ ಈ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ 126 ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳ 1434 ಕ್ರೀಡಾಪಟುಗಳು ಭಾಗವಹಿಸಿದ್ದರು. ಕ್ರಿಡಾಕೂಟದ ಉದ್ಘಾಟನಾ ಸಮಾರಂಭದದಲ್ಲಿ ನಡೆದ ಆಕರ್ಷಕ ಪಥ ಸಂಚಲನದಲ್ಲಿ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಗಳಿಸಿಕೊಂಡಿದ್ದಾರೆ.

ಮಹಿಳೆಯರ ವಿಭಾಗದಲ್ಲಿ
ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ಅನಘಾ.ಕೆ.ಎನ್ 200ಮೀ ಹಾಗೂ 400 ಮೀ ಓಟದಲ್ಲಿ ಚಿನ್ನ, ೪x೧೦೦ಮೀ ರಿಲೇಯಲ್ಲಿ ಬೆಳ್ಳಿ, ೪x೪೦೦ಮೀ ಮಿಕ್ಸೆಡ್ ರಿಲೇಯಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಅರ್ಪಿತಾ ಬಾಲಚಂದ್ರ ನಾಯ್ಕ್ ೪೦೦ಮೀ ಹರ್ಡಲ್ಸ್ನಲ್ಲಿ ಬೆಳ್ಳಿ, ೪x೪೦೦ಮೀ ರಿಲೇಯಲ್ಲಿ ಬೆಳ್ಳಿ ಹಾಗೂ ಹಾಗೂ ಟ್ರಿಪಲ್ ಜಂಪ್ನಲ್ಲಿ ಕಂಚಿನ ಪದಕ . ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿನಿ ವಿದ್ಯಾ ಸಿ ಎಸ್ ೨೦ಕಿಮೀ ನಡಿಗೆಯಲ್ಲಿ ಬೆಳ್ಳಿಯ ಪದಕ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವರ್ಷಿತಾ.ಪಿ.ಆಳ್ವ ಜಾವೆಲಿನ್ ಥ್ರೋನಲ್ಲಿ ಬೆಳ್ಳಿಯ ಪದಕ, ತೃತೀಯ ವರ್ಷದ ಎಐಎಂಎಲ್ ವಿಭಾಗದ ಚೈತನ್ಯ.ಎ.ಎನ್ ೧೦೦ಮೀ ಹರ್ಡಲ್ಸ್ನಲ್ಲಿ ಬೆಳ್ಳಿ ಮತ್ತು ೪x೧೦೦ಮೀ ರಿಲೇಯಲ್ಲಿ ಬೆಳ್ಳಿ, ಪ್ರಥಮ ವರ್ಷದ ಸಿವಿಲ್ ವಿಭಾಗದ ಶುಭಶ್ರೀ.ಬಿ.ಎಸ್ ೪x೧೦೦ಮೀ ರಿಲೇಯಲ್ಲಿ ಬೆಳ್ಳಿ, ದ್ವಿತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ಪೂಜಾಶ್ರೀ ೪x೧೦೦ಮೀ ರಿಲೇಯಲ್ಲಿ ಬೆಳ್ಳಿ ಹಾಗೂ ಹೆಪ್ಟತ್ಲಾನ್ನಲ್ಲಿ ಕಂಚಿನ ಪದಕ, ತೃತೀಯ ವರ್ಷದ ಡಾಟಾ ಸೈನ್ಸ್ ವಿಭಾಗದ ಅಶ್ವಿನಿ ೪x೪೦೦ಮೀ ರಿಲೇಯಲ್ಲಿ ಬೆಳ್ಳಿ ಹಾಗೂ ೪x೪೦೦ಮೀ ಮಿಕ್ಸೆಡ್ ರಿಲೇಯಲ್ಲಿ ಕಂಚು, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಬಿಂದುಶ್ರೀ.ಎಚ್.ರೈ ೪x೪೦೦ಮೀ ರಿಲೇಯಲ್ಲಿ ಬೆಳ್ಳಿ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ ೪x೪೦೦ಮೀ ರಿಲೇಯಲ್ಲಿ ಬೆಳ್ಳಿ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಸಿಂಚನ.ವಿ.ಎಸ್ ಪೋಲ್ವಾಲ್ಟ್ನಲ್ಲಿ ಕಂಚು ಹಾಗೂ ೧೦೦ಮೀ ಹರ್ಡಲ್ಸ್ನಲ್ಲಿ ಕಂಚಿನ ಪದಕದ ಸಾಧನೆಯನ್ನು ಮಾಡಿದ್ದಾರೆ.

ಫುರುಷರ ವಿಭಾಗದಲ್ಲಿ
ಅಂತಿಮ ವರ್ಷದ ಎಐಎಂಎಲ್ ವಿಭಾಗದ ಅನ್ವಿತ್.ಬಿ.ಎಂ ೨೦ ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಚಿನ್ನ, ದ್ವಿತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ನಂದೀಶ್.ಬಿ.ಟಿ ೪೦೦ಮೀ ಹರ್ಡಲ್ಸ್ನಲ್ಲಿ ಬೆಳ್ಳಿ ಹಾಗೂ ೪x೪೦೦ಮೀ ಮಿಕ್ಸೆಡ್ ರಿಲೇಯಲ್ಲಿ ಕಂಚು, ತೃತೀಯ ಎಲೆಕ್ಟ್ರಾನಿಕ್ಸ್ ವಿಭಾಗದ ಸನ್ಮಿತ್ ೧೧೦ಮೀ ಹರ್ಡಲ್ಸ್ನಲ್ಲಿ ಕಂಚು ಹಾಗೂ ೪x೧೦೦ಮೀ ರಿಲೇಯಲ್ಲಿ ಕಂಚು, ಪ್ರಥಮ ವರ್ಷದ ಎಂಬಿಎ ವಿಭಾಗದ ಸುಮಂತ್.ಎಚ್.ಎಲ್ ೮೦೦ ಮೀ ಓಟದಲ್ಲಿ ಕಂಚು, ಅಂತಿಮ ವರ್ಷದ ಮೆಕ್ಯಾನಿಕಲ್ ವಿಭಾಗದ ಅಜಿತ್ ಕುಮಾರ್.ಎಂ ೨೦ ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಂಚು, ಅಂತಿಮ ವರ್ಷದ ಎಐಎಂಎಲ್ ವಿಭಾಗದ ಜಗದೀಶ್.ಕೆ ೪x೧೦೦ಮೀ ರಿಲೇಯಲ್ಲಿ ಕಂಚು, ತೃತೀಯ ವರ್ಷದ ಕಂಪ್ಯೂಟರ್ ವಿಭಾಗದ ಕಾರ್ತಿಕ್.ಆರ್ ೪x೧೦೦ಮೀ ರಿಲೇಯಲ್ಲಿ ಕಂಚು, ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ರಮಿತ್ರಾಜ್.ಎನ್.ಎಸ್ ೪x೧೦೦ಮೀ ರಿಲೇಯಲ್ಲಿ ಕಂಚು, ದ್ವಿತೀಯ ವರ್ಷದ ಡಾಟಾ
ಸೈನ್ಸ್ ವಿಭಾಗದ ಭುವನ್ ಕುಮಾರ್.ಎ.ಸಿ ಲಾಂಗ್ಜಂಪ್ನಲ್ಲಿ ಕಂಚು, ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಸಂಭ್ರಮ್ ೪x೪೦೦ಮೀ ಮಿಕ್ಸೆಡ್ ರಿಲೇಯಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಕಾಲೇಜಿನ ತಂಡಕ್ಕೆ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಬಾಲಚಂದ್ರ ಗೌಡ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದರು ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.