
ಪುತ್ತೂರು: ವಿದ್ಯಾ ಕೀರ್ತಿ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಈ ಎಸ್ ಆರ್ ಪ್ರೆಸಿಡೆನ್ಸಿ ಸ್ಕೂಲ್ ಮರಿಲ್ , ಪುತ್ತೂರು ನಗರಸಭೆ ಸಹಯೋಗದೊಂದಿಗೆ ಸಾಹಸ್ ಸಂಸ್ಥೆಯ ವತಿಯಿಂದ ವೈಜ್ಞಾನಿಕವಾಗಿ ಗಣತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ ಮಾರ್ಚ್ 19ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಸಿದ್ದಪ್ಪ ಒಡೆಯರ್ ತ್ಯಾಜ್ಯಗಳನ್ನು ನಿರ್ವಹಿಸುವ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಮಾಹಿತಿಯನ್ನು ನೀಡಿದರು ಹಾಗೂ ಪ್ಲಾಸ್ಟಿಕ್ ಬಳಕೆ ಬಗ್ಗೆ ವಿವರವಾಗಿ ತಿಳಿಸಿದರು ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ, ಎನ್‌ಜಿಓ ದ ಗಣೇಶ್ ಕೆಆರ್, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮವನ್ನು ಸಹಶಿಕ್ಷಕಿಯರಾದ ರಾಹಿಲಾ ಅವರು ಸ್ವಾಗತಿಸಿ, ಫಾತಿಮಾತ್ ಝಿಯಾನ ವಂದಿಸಿದರು.