ಪುತ್ತೂರು: ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ.26ರಂದು ಸಾಹಿತ್ಯ ಸಂಘದ ವತಿಯಿಂದ ಸಂಗೀತ ಸಾಂಗತ್ಯ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈಯವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿಯವರು ಕಾನೂನು ಪದವಿಯನ್ನು ಪಡೆದು, ಆಲ್ ಇಂಡಿಯಾ ಬಾರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ. ಮುಂದೆ ಇವರು ಭಾರತದ ಯಾವುದೇ ನ್ಯಾಯಾಲಯದಲ್ಲಿ ಅಭ್ಯಾಸ ಮಾಡಲು ಅರ್ಹರಾಗಿರುತ್ತಾರೆ. ಈ ಹಿನ್ನಲೆಯಲ್ಲಿ ಇವರನ್ನು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸನ್ಮಾನಿಸಲಾಯಿತು.
ಸನ್ಮಾನಿತರಾದ ಅಶ್ವಿನ್ ಎಲ್.ಶೆಟ್ಟಿಯವರು ಕೃತಜ್ಞತೆ ಸಲ್ಲಿಸಿದರು. ಸನ್ಮಾನ ಪತ್ರವನ್ನು ಸಂಸ್ಥೆಯ ಪ್ರಾಚಾರ್ಯರಾದ ಡಾ.ರಾಜಲಕ್ಷ್ಮೀ ಎಸ್. ರೈಯವರು ವಾಚಿಸಿದರು. ಸನ್ಮಾನಿತರ ಪರಿಚಯವನ್ನು ಉಪನ್ಯಾಸಕಿ ಪ್ರತಿಭಾ ಎಸ್ ನಿರ್ವಹಿಸಿದರು.
ಸಂಪನ್ಮೂಲ ವ್ಯಕ್ತಿ ಸೀತಾರಾಘವ ಪದವಿ ಪೂರ್ವ ಕಾಲೇಜು ಪೆರ್ನಾಜೆಯ ನಿವೃತ್ತ ಪ್ರಾಚಾರ್ಯ ಕೆ.ಆರ್.ಗೋಪಾಲ ಕೃಷ್ಣ ಸಂಗೀತದ ರಸದೌತಣವನ್ನು ನೀಡಿದರು. ಕಸ್ತೂರಿ ಕಲಾ ಎಸ್ರೈ, ಟ್ರಸ್ಟಿ ರಶ್ಮಿ ಅಶ್ವಿನ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯ ಪ್ರಾಂಶುಪಾಲೆ ಶಶಿಕಲಾ ಆಳ್ವ, ಸಾಹಿತ್ಯ ಸಂಘದ ಸಂಘಟಕರಾದ ವಾಗ್ದೇವಿ ಜಿ ಹಾಗೂ ವಿದ್ಯಾರ್ಥಿ ಸಂಘದ ಸಂಘಟಕರಾದ ಪ್ರಸ್ತುತಿ ಉಪಸ್ಥಿತರಿದ್ದರು.
ಸಂಸ್ಥೆಯ ಉಪ ಪ್ರಾಂಶುಪಾಲರಾದ ಶೇಷಗಿರಿ ಎಂ ಸ್ವಾಗತಿಸಿ ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ನಿತ್ಯಶ್ರೀ ವಂದಿಸಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ಕಲ್ಪನಾ ಕಾರ್ಯಕ್ರಮದ ನಿರೂಪಿಸಿದರು.
