





ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.7ರಿಂದ ಎ.11ವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಕಾರ್ಯವು ಎ.2ರಂದು ಬೈಲುಗುತ್ತುವಿನಲ್ಲಿ ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ನೇತ್ರತ್ವದಲ್ಲಿ ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆಯೊಂದಿಗೆ ಗೊನೆ ಮುಹೂರ್ತ ನೆರವೇರಿಸಿದರು.
ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸಮಿತಿಯ ಸದಸ್ಯರುಗಳು, ಭಕ್ತಾದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಎ: 7ರಿಂದ ಎ:11 ರವರೆಗೆ ಜಾತ್ರೋತ್ಸವ:
ಕ್ಷೇತ್ರದಲ್ಲಿ ಎ.7ರಿಂದ ಎ.11ವರೆಗೆ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತ್ರತ್ವದಲ್ಲಿ 5 ದಿವಸದ ಜಾತ್ರೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
















