ಕೆಯ್ಯೂರು: ಕೆಯ್ಯೂರು ಗ್ರಾಮದ ಮಾಡಾವು ಶ್ರೀ ಹೊಸಮ್ಮದೈವಸ್ಥಾನ ಪಲ್ಲತ್ತಡ್ಕದಲ್ಲಿ ಶ್ರೀ ಹೊಸಮ್ಮ ದೈವದ ನೇಮೋತ್ಸವವು ಎ.5ರಂದು ನಡೆಯಲಿದೆ.
ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಳಶ ಪೂಜೆ, ಶ್ರೀ ನಾಗದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳ ತಂಬಿಲ, ಶ್ರೀ ವೆಂಕಟರಮಣ ದೇವರ ಸೇವೆ, ಮಧ್ಯಾಹ್ನ: ಶ್ರೀ ದೇವಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ,ನಡೆಯಲಿದೆ.
ರಾತ್ರಿ ಶ್ರೀ ದುರ್ಗಾ ಭಜನಾ ಮಂಡಳಿ ಕೆಯ್ಯೂರು ಇವರಿಂದ ಭಜನಾ ಕಾರ್ಯಕ್ರಮ, ಭಂಡಾರ ತೆಗೆಯುವುದು, ಅನ್ನಸಂತರ್ಪಣೆ, ನಂತರ ಶ್ರೀ ಹೊಸಮ್ಮ ದೈವದ ನೇಮೋತ್ಸವ, ಪ್ರಸಾದ ವಿತರಣೆ, ಎ.6ರಂದು ಬೆಳಿಗ್ಗೆ ಶ್ರೀ ದೈವದ ಗಣಗಳಿಗೆ ಬಲಿ ಸೇವೆ.ಎ.7ರಂದು ಬೆಳಿಗ್ಗೆ ಪರಿವಾರ ದೈವಗಳಾದ ಪಂಜುರ್ಲಿ, ಕಲ್ಲುರ್ಟಿ, ಕಲ್ಲಾಲ್ತ, ಗುಳಿಗ ಮತ್ತು ಓರಿಮಾಣಿ ಗುಳಿಗ ದೈವಗಳ ನೇಮ ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.