ಪುತ್ತೂರು:IISC IITಮತ್ತು NITಸಂಸ್ಥೆಗಳ ಮೂಲಕ Artificial Inteligence and Machine Learning ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿನ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ರೂ.1500 ಶಿಷ್ಯವೇತನ/ತರಬೇತಿ ನೀಡಲಾಗುತ್ತದೆ. ಶಿಷ್ಯವೇತನ ಪಡೆಯಲು ಎ.11 ಅಂತಿಮ ದಿನವಾಗಿರುತ್ತದೆ. ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದರ್ಬೆ ಪುತ್ತೂರು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ದೃಢೀಕರಿಸಿ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.