ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

0

ಪುತ್ತೂರು:ಪುತ್ತೂರು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ಮಂಗಳೂರು), ತಾಲೂಕು ಕಾನೂನು ಸೇವೆಗಳ ಸಮಿತಿ (ಪುತ್ತೂರು), ವಕೀಲರ ಸಂಘ, ಹಾಗೂ ಲಯನ್ಸ್ ಕ್ಲಬ್, ಪುತ್ತೂರು ಸಹಯೋಗದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನ ವ್ಯವಹಾರಿಕ ನ್ಯಾಯಧೀಶರು ಮತ್ತು ಜೆ. ಎಂ. ಎಫ್. ಸಿ. ಅರ್ಚನಾ ಕೆ. ಉಣ್ಣಿತಾನ್ ಮಾತನಾಡಿ, “ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಮುನ್ನಡೆ ಸಾಧಿಸಬೇಕು ಮತ್ತು ಅವರ ಮೇಲಿನ ದೌರ್ಜನ್ಯವನ್ನು ನಿಲ್ಲಿಸಲು ಎಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕು”. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಹಾಗೂ ಮುನ್ನಡೆಗೆ ಅವಕಾಶ ಇರಲಿಲ್ಲ. ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದುವರಿದರೂ, ಅವರ ಮೇಲಿನ ಅಕ್ರಮ ಮತ್ತು ದೌರ್ಜನ್ಯ ಮಾತ್ರ ಕಡಿಮೆಯಾಗಿಲ್ಲ. ಇದನ್ನು ತಡೆಗಟ್ಟುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ ಮಾತನಾಡಿ, “ಮಹಿಳೆ ಶಾರೀರಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಶಕ್ತಿಯನ್ನು ಹೊಂದಿರುವವಳು. ನಮ್ಮ ಜೀವನದಲ್ಲಿ ಏನನ್ನಾದರೂ ಬದಲಾಯಿಸಲು, ನಾವು ಮೊದಲು ನಮ್ಮನ್ನು ಅರಿತುಕೊಳ್ಳಬೇಕು ಮತ್ತು ಧನಾತ್ಮಕ ದೃಷ್ಟಿಕೋನವನ್ನು ಹೊಂದಬೇಕು. ಖುಷಿಯಿಂದ ಜೀವನವನ್ನು ಮುನ್ನಡೆಸುವುದು ಅತ್ಯಗತ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷೆ ಪ್ರೇಮಲತಾ ರಾವ್, ಒಂದು ಮನೆಯ ಮಹಿಳೆ ಸುಖ-ಸಂತೋಷದಿಂದಿದ್ದರೆ, ಆ ಮನೆಯ ಸಂಪೂರ್ಣ ವಾತಾವರಣ ಸಂತೋಷಕರವಾಗಿರುತ್ತದೆ. ಹಾಗೆಯೇ, ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರೀತಿಯಿಂದ ನೋಡಿಕೊಂಡು, ಉತ್ತಮ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನು ರೂಪಿಸಬಹುದು”, ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ತ್ರಿವೇಣಿ ಪೆರುವೋಡಿ, ವಕೀಲರ ಸಂಘದ ಜತೆ ಕಾರ್ಯದರ್ಶಿ ಮಮತಾ ಸುವರ್ಣ, ಕಾಲೇಜಿನ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್, ಪ್ಯಾರಾ ಲೀಗಲ್ ವಲೆಂಟಿಯರ್ ನಯನಾ ರೈ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕರು ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್ ಸ್ವಾಗತಿಸಿ, ಪ್ರಶಿಕ್ಷಣಾರ್ಥಿಗಳಾದ ಜಯಶ್ರೀ, ಚೈತನ್ಯ, ಮತ್ತು ಜಸ್ಮಿತಾ ಪ್ರಾರ್ಥಿಸಿ, ನಯನಾ ರೈ ವಂದಿಸಿದರು. ಪ್ರಶಿಕ್ಷಣಾರ್ಥಿ ಪವಿತ್ರ ನಿರೂಪಿಸಿದರು.

LEAVE A REPLY

Please enter your comment!
Please enter your name here