ಎ.27: ಪುತ್ತೂರಿನಲ್ಲಿ “ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್” ಪ್ರಥಮ ವಾರ್ಷಿಕೋತ್ಸವ ಸಮಾರಂಭ

0

ಪುತ್ತೂರು: ಉನ್ನತ ವಿದ್ಯಾಭ್ಯಾಸ ಮಾಡಲುದ್ದೇಶಿಸುವ ಸಮುದಾಯದ ವಿದ್ಯಾರ್ಥಿಗಳ ಪಾಲಿನ ಆಶಾಕಿರಣವಾಗಿ ಮೂಡಿ ಬಂದಿರುವ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ಸಂಸ್ಥೆಯು ತನ್ನ ಪ್ರಥಮ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ.

ಸಂಸ್ಥೆಯ ಆಪ್‌ನಲ್ಲಿ ಈಗಾಗಲೇ ಹಲವು ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದು ಅವರಿಗೆ ನುರಿತ ಕೌನ್ಸಿಲರ್‌ಗಳಿಂದ ಕೌನ್ಸೆಲಿಂಗ್ ಮಾಡಲಾಗಿದೆ. ಕೌನ್ಸಿಲರ್‌ಗಳ ವರದಿಯ ನಂತರ ಅರ್ಹತೆ ಆಧಾರದಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ.

ಇದೀಗ ಸಂಸ್ಥೆಯು ಪ್ರಥಮ ವರ್ಷ ಪೂರೈಸುತ್ತಿದ್ದು ಎಪ್ರಿಲ್ 27ರಂದು ಪೂರ್ವಾಹ್ನ ಗಂಟೆ 9.30ಕ್ಕೆ ಸರಿಯಾಗಿ ಪುತ್ತೂರು ಮಹಾವೀರ ಸಭಾಂಗಣದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸುತ್ತಿದೆ. ಇದರಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸುವ ಮೂಲಕ ಸದುಪಯೋಗಪಡಿಸಿಕೊಳ್ಳಬೇಕು ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಅಪ್ಲಿಕೇಶನ್‌ನಲ್ಲಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್‌ನ ಚೇರ್‌ಮೆನ್ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here