ಸಿಟಿಗುಡ್ಡೆ ನಿವಾಸಿ ನಿವೃತ್ತ ಶಿಕ್ಷಕ ಲಿಂಗಪ್ಪ ನಾಯ್ಕ ನಿಧನ

0

ನಿಡ್ಪಳ್ಳಿ: ಪುತ್ತೂರು ತಾಲೂಕು ಕಬಕ ಗ್ರಾಮದ ಸಿಟಿಗುಡ್ಡೆ ನಿವಾಸಿ ನಿವೃತ್ತ ಶಿಕ್ಷಕ ಲಿಂಗಪ್ಪ ನಾಯ್ಕ (66 ವ) ಎಂಬವರು ಅಲ್ಪಕಾಲದ ಅನಾರೋಗ್ಯದಿಂದ ಏ.19 ರಂದು ಸ್ವಗೃಹದಲ್ಲಿ ನಿಧನರಾದರು.

 ಇವರು 1984 ರಲ್ಲಿ ಎಕ್ಕಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದರು.ನಂತರ ಅಲ್ಲಿಂದ ವರ್ಗಾವಣೆಗೊಂಡು 1986 ರಲ್ಲಿ ಬೆಳ್ತಂಗಡಿ ತಾಲೂಕಿನ ಕಿಲ್ಲೂರು ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದರು. ಮತ್ತೆ 1996 ರಲ್ಲಿ ವರ್ಗಾವಣೆಗೊಂಡು ಸ.ಹಿ.ಪ್ರಾ.ಶಾಲೆ ಕೊಡಿಪ್ಪಾಡಿ ಇಲ್ಲಿ ಸುದೀರ್ಘ 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ದ.ಕಿ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿಗೆ ವರ್ಗಾವಣೆಗೊಂಡು  ಅಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಇವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು ಮಕ್ಕಳಿಗೆ ಬಹಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು.

 ಮೃತರು ಪತ್ನಿ ಕರ್ಮಲ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಸಂತಿ ಹಾಗೂ ಪುತ್ರ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿರುವ ರಂಜಿತ್ ಇವರನ್ನು ಅಗಲಿದ್ದಾರೆ. 

LEAVE A REPLY

Please enter your comment!
Please enter your name here