ನೆಲ್ಯಾಡಿ: ಎ.26ರಂದು ನಡೆಯಲಿರುವ ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಯಲ್ಲಿ ಮಹಿಳಾ ಮೀಸಲು ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಕೊಣಾಲು ಆರ್ಲ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಉಷಾ ಅಂಚನ್ ಅವರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ.
ದ.ಕ.ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಿರುವ ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 16 ನಿರ್ದೇಶಕ ಸ್ಥಾನಗಳ ಪೈಕಿ ದ.ಕ.ಮತ್ತು ಉಡುಪಿ ಜಿಲ್ಲೆಯಿಂದ ತಲಾ 1 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ. ಮಹಿಳಾ ಮೀಸಲು ಸ್ಥಾನಕ್ಕೆ ದ.ಕ.ಜಿಲ್ಲೆಯಿಂದ ಕಡಬ ತಾಲೂಕಿನ ಕೊಣಾಲು ಗ್ರಾಮದ ಕೊಣಾಲು-ಆರ್ಲ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಉಷಾ ಅಂಚನ್ ಸಹಿತ ಎರಡು ಜಿಲ್ಲೆಯಿಂದ ಒಟ್ಟು 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಅಂತಿಮ ಕಣದಲ್ಲಿ ಉಳಿದುಕೊಂಡಿದ್ದರು. ಇದೀಗ ಉಷಾ ಅಂಚನ್ ಅವರು ಅನಿವಾರ್ಯ ಕಾರಣಗಳಿಂದ ಚುನಾಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವುದಿಲ್ಲ. ಚುನಾವಣಾ ಸ್ಪರ್ಧೆಯಿಂದ ನಿವೃತ್ತಿ ಹೊಂದಿರುವುದಾಗಿ ಘೋಷಣೆ ಮಾಡಿದ್ದಾರೆ.