





ಪುತ್ತೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ.)ನ ನವೋದಯ ಸ್ವಸಹಾಯ ಗುಂಪುಗಳ 25ನೇ ವರ್ಷಾಚರಣೆಯ ರಜತ ಸಂಭ್ರಮ-2025 ಕಾರ್ಯಕ್ರಮ ಮೇ.10ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಮಂತ್ರಿಸಲಾಯಿತು. ರಜತ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಸಮಿತಿ ಪ್ರಧಾನ ಕಾರ್ಯದರ್ಶಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್, ಟ್ರಸ್ಟ್ನ ಟ್ರಸ್ಟಿ ಸುನಿಲ್ ಕುಮಾರ್ ಬಜಗೋಳಿ ಉಪಸ್ಥಿತರಿದ್ದರು.








