ಪುತ್ತೂರು: ಕಬಕ ಕೂವೆತ್ತಿಲ ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಮೇ.1ರಂದು ವರ್ಕಾಡಿ ಬ್ರಹ್ಮಶ್ರೀ ವೇದಮೂರ್ತಿ ದಿನೇಶಕೃಷ್ಣ ತಂತ್ರಿಗಳು ಮತ್ತು ವೇದಮೂರ್ತಿ ಉಂಡೆಮನೆ ಶ್ರೀಕೃಷ್ಣ ಭಟ್ರವರ ನೇತೃತ್ವದಲ್ಲಿ ನಡೆಯಲಿದೆ. ಎ.30ರಂದು ಬೆಳಿಗ್ಗೆ 108 ತೆಂಗಿನಕಾಯಿ ಗಣಪತಿ ಹವನ, ಗಣಪತಿ ಹವನ ಪೂರ್ಣಾಹುತಿ, ಮಹಾಪೂಜೆ, ರಾತ್ರಿ ಶ್ರೀ ಮಹಾಗಣಪತಿ ದೇವರಿಗೆ ಶ್ರೀರಂಗ ಪೂಜೆ, ಅತ್ತಾಳ ಪೂಜೆ ನಡೆಯಲಿದೆ. ಮೇ.1ರಂದು ಬೆಳಿಗ್ಗೆ ಗಣಪತಿ ಹವನ, ನವಕ ಕಲಶಾಭಿಷೇಕ, ನಾಗತಂಬಿಲ, ಶಿವಪೂಜೆ, ಮಧ್ಯಾಹ್ನ ಮಹಾಪೂಜೆ, ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಾಯಂಕಾಲ ದೀಪಾರಾಧನೆ, ರಾತ್ರಿ ಶ್ರೀರಂಗ ಪೂಜೋತ್ಸವ, ಉತ್ಸವ ಬಲಿ, ಕಟ್ಟೆ ಪೂಜೆ, ದೇವರ ಸವಾರಿ, ವಸಂತೋತ್ಸವ, ಮಂತ್ರಾಕ್ಷತೆ ನಡೆಯಲಿದೆ ಎಂದು ಧರ್ಮದರ್ಶಿ ಕೆ.ದೇವಕಿ ಅಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಮೇ.1: ಕೂವೆತ್ತಿಲ ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ