ಕಡಬ : ನಾಪತ್ತೆಯಾಗಿದ್ದ ಯುವಕನ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ಕಡಬ ತಾಲೂಕು ಬಳ್ಪ ಗ್ರಾಮದಿಂದ ವರದಿಯಾಗಿದೆ.
ಬಳ್ಪ ಗ್ರಾಮದ ಪಾದೆ ನರಿಯಾಂಗ ಕೊರಗಪ್ಪ ಎಂಬವರ ಪುತ್ರ ಗಣೇಶ್ (29ವ) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವಕ.
ಸುಬ್ರಹ್ಮಣ್ಯದ ಲಾಡ್ಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಎ.21 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಇದೀಗ ಪಕ್ಕದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಯುವಕನ ಬೈಕ್ ಕೂಡ ಅಲ್ಲೇ ಪಕ್ಕದಲ್ಲಿ ಪತ್ತೆಯಾಗಿದೆ.
ಈತನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.