ಉಪ್ಪಿನಂಗಡಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು, ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗ್ರಾಮ ಪಂಚಾಯತ್ ಉಪ್ಪಿನಂಗಡಿ ಹಾಗೂ ದಿವ್ಯ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ಕಸೂತಿ ತರಬೇತಿ ಸಮಾರೋಪ ಸಮಾರಂಭ ಉಪ್ಪಿನಂಗಡಿ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಶ್ರೀ ಎಡ್ರಿಚ್ ಅಜಯ್ ಡಿ,ಸೋಜಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇವರು ಮಹಿಳೆಯರು ತರಬೇತಿ ಪಡೆದು ಸ್ವ ಉದ್ಯೋಗ ಮಾಡುವಲ್ಲಿ ಗಮನ ಹರಿಸಿ, ಬ್ಯಾಂಕ್ ಸಾಲ ಸೌಲಭ್ಯ ಪಡೆದು ಯಶಸ್ವಿ ಮಹಿಳಾ ಉದ್ಯಮಿದಾರರಾಗಲು ಕರೆ ನೀಡಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗು ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಇವರು ಮಾತನಾಡಿ ಸ್ವಉದ್ಯೋಗದ ನಿಯಮಗಳ ಕುರಿತಾಗಿ ತಿಳಿಸಿ ಮಹಿಳೆಯರು ತಮ್ಮ ಮಾರುಕಟ್ಟೆ ಕೌಶಲ್ಯ ಹೆಚ್ಚಿಸಲು ಹೆಚ್ಚಿನ ಗಮನ ಹರಿಸುವ ಬಗ್ಗೆ ತಿಳಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡಿಗ್ರೇಸ್, ಪಂಚಾಯತ್ ಕಾರ್ಯದರ್ಶಿ ಗೀತಾ ಶೇಖರ್, ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಶಾಖೆ ಪ್ರಬಂಧಕರಾದ ವೆಂಕಟ್ ಶಾತ, ವ್ಯವಸ್ಥಾಪಕರು ಕೃಷಿಯೇತರ ಚಟುವಟಿಕೆ ಹಾಗು ತಾಲೂಕು ಅಭಿಯಾನ ನಿರ್ವಹಣೆ ಘಟಕದ ನಳಿನಿ, ಗ್ರಾಮ ಪಂಚಾಯತ್ ಸದಸ್ಯರಾದ ಲತಾ, ದಿವ್ಯ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಉಪ್ಪಿನಂಗಡಿ ಇದರ ಅಧ್ಯಕ್ಷರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ವೇತಾ, ರುಕ್ಮಿಣಿ ಸ್ವಾಗತಿಸಿದರು. ಭಾರತಿ ಧನ್ಯವಾದ ಮಾಡಿದರು. ಕಾರ್ಯಕ್ರಮದಲ್ಲಿ ಸಂಜೀವಿನಿ ಸದಸ್ಯರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು.