ಪುತ್ತೂರು: ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಅವರ ಪುತ್ರ ಪ್ರಹ್ಲಾದ್ ಅವರ ಬ್ರಹ್ಮೋಪದೇಶ ಸ್ವೀಕಾರ ಕಾರ್ಯಕ್ರಮ ಎ.23ರಂದು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ ನರಿಮೊಗರು ಇಲ್ಲಿನ ಗೌರೀಶಂಕರ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಸಹಿತ ಹಲವು ಗಣ್ಯರು ಭಾಗವಹಿಸಿದ್ದರು. ಪ್ರವೀಣ್ ಆಚಾರ್ಯ ಹಾಗೂ ಅವರ ಪತ್ನಿ ಸೌಮ್ಯ ಪ್ರವೀಣ್ ಆಚಾರ್ಯ ಅತಿಥಿಗಳನ್ನು ಸ್ವಾಗತಿಸಿದರು. ಕುಟುಂಬಸ್ಥರು, ಬಂಧು ಮಿತ್ರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.