ಪುತ್ತೂರು:ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವವು ಎ.28ರಂದು ನಡೆಯಿತು.
ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಕಲಶಾಭಿಷೇಕ ನಡೆಯಿತು. ಬಳಿಕ ದೇವರ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆಗೊಂಡಿತು.

ಮಧ್ಯಾಹ್ನ ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ರಂಗಪೂಜೆ ಹಾಗೂ ದೈವಗಳಿಗೆ ತಂಬಿಲ ನೆರವೇರಿತು. ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ಒಳತ್ತಡ್ಕ, ಕುಂಜೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗನ್ನಾಥ ರೈ, ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ಮಾಜಿ ಸದಸ್ಯರು ಸೇರಿದಂತೆ ಹಲವು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.