ಪುತ್ತೂರು/ಕಾವು: ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿ ಮಾಡನ್ನೂರ್ ಇದರ ಆಶ್ರಯದಲ್ಲಿ ಬೃಹತ್ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ ಹಾಗೂ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು 2025 ಮೇ 02 ಶುಕ್ರವಾರ ಮಗ್ರಿಬ್ ನಮಾಝಿನ ನಂತರ ನಡೆಯಲಿದೆ.
ಕಾರ್ಯಕ್ರಮದಲ್ಲಿ ಹಲವಾರು ಪ್ರಮುಖ ಉಲಮಾಗಳು ಸಾದಾತುಗಳು ಸಾಮಾಜಿಕ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಸ್ತ್ರೀಯರಿಗೆ ಪ್ರತ್ಯೇಕ ಸ್ಥಳವಕಾಶ ಇರುತ್ತದೆ.ಕಾರ್ಯಕ್ರಮದ ಕೊನೆಯಲ್ಲಿ ಅನ್ನದಾನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.