ಕಾವು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಮಳಿ ಸಮೀಪ ನಡೆದಿದೆ.
ಮಡಿಕೇರಿಯಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾವು ಮಳಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಘಟನೆಯಲ್ಲಿ ಎರಡು ವಿದ್ಯುತ್ ಕಂಬಗಳಿಗೆ ಹಾನಿಯುಂಟಾಗಿದೆ ಎಂದು ತಿಳಿದು ಬಂದಿದೆ.
ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.