ಪುತ್ತೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ವರ್ಗಾಯಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೇ.2 ರಂದು ಬರೆದ ಪತ್ರದಲ್ಲಿ, ಮೇ.1ರ ರಾತ್ರಿ ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿಯ ಹತ್ಯೆ ತ್ರೀವ ಅಘಾತಕಾರಿಯಾಗಿದ್ದು, ಸಂಸದ ಚೌಟ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕೃತ್ಯವನ್ನು ಕ್ರೂರ ಮತ್ತು ಸಾರ್ವಜನಿಕ ದೃಷ್ಟಿಯಲ್ಲಿ ಶಿಕ್ಷೆಯಿಂದ ಮುಕ್ತ ಎಂದು ಕರೆದ ಅವರು, ಈ ಘಟನೆಯು ಇಡೀ ಕರಾವಳಿ ಕರ್ನಾಟಕ ಪ್ರದೇಶವನ್ನು ಬೆಚ್ಚಿಬೀಳಿಸಿದೆ ಎಂದು ಹೇಳಿದ್ದಾರೆ.
ಸುಹಾಸ್ ಶೆಟ್ಟಿಯವರ ಕುಟುಂಬ ಮತ್ತು ಸ್ಥಳೀಯ ಸಮುದಾಯದ ದುಃಖ ಮತ್ತು ನ್ಯಾಯಕ್ಕಾಗಿ ಬೇಡಿಕೆ ಮುಂದಿಟ್ಟಿದ್ದು, ಎನ್ಐಎಯಿಂದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳುವಂತೆ ಕೇಂದ್ರ ಸಚಿವರನ್ನು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.