ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮೇ. 6ರಂದು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.5ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 11.30ಕ್ಕೆ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಮೈದಾನದಿಂದ ಮೆರವಣಿಗೆಯಲ್ಲಿ ಸಾಗಿ ಶ್ರೀ ದೇವಳಕ್ಕೆ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ 12.15ರಿಂದ ತುಲಾಭಾರ ಸೇವೆ, ಮಧ್ಯಾಹ್ನ 1ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ನಡೆಯಲಿದೆ.
ಮೇ.6ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, ಬೆಳಿಗ್ಗೆ 9ರಿಂದ ಗಣಪತಿ ಹವನ, ಕಲಶಪೂಜೆ, ಅಶ್ವತ್ಥ ಕಲ್ಪೋಕ್ತ ಪೂಜೆ, ಶ್ರೀ ರಕ್ತೇಶ್ವರಿ ಸಹಿತ ಪರಿವಾರ ದೈವಗಳಿಗೆ ತಂಬಿಲ, ಶ್ರೀ ನಾಗದೇವರಿಗೆ ತಂಬಿಲ, ಶ್ರೀ ಸತ್ಯನಾರಾಯಣ ಪೂಜೆ, ಕಲಶಪೂಜೆ, ಕಲಶಾಭಿಷೇಕದೊಂದಿಗೆ ಶ್ರೀ ಮಹಾವಿಷ್ಣು, ಶ್ರೀ ಮಹಾಗಣಪತಿ, ನಾಗದೇವರುಗಳು ಹಾಗೂ ಶ್ರೀ ರಕ್ತೇಶ್ವರಿ, ಮಹಿಷಂದಾಯ, ಪಂಜುರ್ಲಿ, ಗುಳಿಗ ದೈವಗಳು ಮತ್ತು ವೃಕ್ಷರಾಜ ಅಶ್ವತ್ಥ ಪ್ರತಿಷ್ಠಾ ವಾರ್ಷಿಕ ಉತ್ಸವ ನಡೆಯಲಿದೆ.
ಬೆಳಿಗ್ಗೆ 10ರಿಂದ 12ರವರೆಗೆ ಬೀತಲಪ್ಪು ಶ್ರೀ ಅಯ್ಯಪ್ಪ ಭಜನಾ ಮಂಡಳಿ ಮತ್ತು ಅಂಬೆಲ ಶ್ರೀ ರಾಜಶ್ರೀ ಭಜನಾ ಮಂಡಳಿಯವರಿಂದ ಭಜನಾ ಸೇವೆ ನಡೆಯಲಿದೆ. ಮಧ್ಯಾಹ್ನ 12.30ರಿಂದ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ. ಅಪರಾಹ್ನ 3ರಿಂದ ರಾತ್ರಿ 7ರವರೆಗೆ ಆದರ್ಶನಗರ ಶ್ರೀರಾಮ ಭಜನಾ ಮಂಡಳಿ, ಉಪ್ಪಿನಂಗಡಿ ರಾಮನಗರ ಶ್ರೀ ಶಾರದಾ ಮಹಿಳಾ ಭಜನಾ ಮಂಡಳಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿ, ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂಡಳಿ ಮತ್ತು ಶಾಂತಿನಗರ ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಸೇವೆ ನಡೆಯಲಿದೆ. ರಾತ್ರಿ 7.15ರಿಂದ ಶ್ರೀ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ ಜರಗಲಿದೆ. ರಾತ್ರಿ 8ರಿಂದ ದೇವಳದ ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಸಂಶೋಧನಾ ಪ್ರಾಧ್ಯಾಪಕರು ಮತ್ತು ತರಬೇತುದಾರರಾದ ಡಾ. ರಾಜೇಶ್ ಬೆಜ್ಜಂಗಳ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಕೇಶವ ಭಂಡಾರಿ ಕೈಪ ಉಪಸ್ಥಿತರಿರಲಿದ್ದಾರೆ. ಸಭೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದ್ದು ರಾತ್ರಿ 9.30ರಿಂದ 12.30ರವರೆಗೆ ಮಲ್ಲ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಕಲಾ ಮಂಡಳಿ ಮಲ್ಲ ಕಾಸರಗೋಡು ಇವರಿಂದ ಸೀತಾ ಕಲ್ಯಾಣ-ಮಾರಣಾದ್ವಾರ ಯಕ್ಷಗಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.