ಉಪ್ಪಿನಂಗಡಿ: ಕುಂತೂರಿನ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ ಹಾಗೂ ಮುಂಬೈ ಹೇರಂಭ ಇಂಡಸ್ಟ್ರೀಸ್ನ ಆಡಳಿತ ನಿರ್ದೇಶಕರಾದ ಡಾ. ಸದಾಶಿವ ಶೆಟ್ಟಿ ಕೂಳೂರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರಲ್ಲದೆ, ದೇವಾಲಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.

ಈ ಸಂದರ್ಭ ದೇವಾಲಯದ ಆಡಳಿತ ಸಮಿತಿಯವರು ಅತಿಥಿಗಳನ್ನು ಸ್ವಾಗತಿಸಿ, ಶಾಲು ಹೊದೆಸಿ ಗೌರವಿಸಿದರು.