ಅಕ್ರಮ ಗಣಿಗಾರಿಕೆ- ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ(CBI COURT VERDICT-7 Yrs JAIL TO JANARDHANA REDDY)

0

ಬೆಂಗಳೂರು: ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥರಾಗಿರುವ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಯವರನ್ನು ಅಪರಾಧಿ ಎಂದು ಘೋಷಿಸಿ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಜನಾರ್ದನ ರೆಡ್ಡಿ ಜೊತೆಗೆ ವಿ.ಡಿ ರಾಜಗೋಪಾಲ್, ಲಿಂಗಾರೆಡ್ಡಿ , ಮೆಹಫೂಝ್‌ ಆಲಿಖಾನ್‌, ಬಿ ವಿ ಶ್ರೀನಿವಾಸ ರೆಡ್ಡಿ ಅವರನ್ನೊಳಗೊಂಡಂತೆ ಓಬಳಾಪುರಂ ಮೈನ್ಸ್‌ ಕಂಪನಿ ಕೂಡ ಅಪರಾಧಿ ಎಂದು ಕೋರ್ಟ್‌ ತೀರ್ಪಿನಲ್ಲಿ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿದ್ದು ಜನಾರ್ದನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅಪರಾಧಿ ಎಂದು ಘೋಷಿಸಿರುವ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

LEAVE A REPLY

Please enter your comment!
Please enter your name here