ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

0

ಪುತ್ತೂರು: 2024 – 25 ನೇ ಸಾಲಿನ ಹತ್ತನೇ ತರಗತಿಯ ಸಾರ್ವತ್ರಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಸಹಕರಿಸಿದ ಶಿಕ್ಷಕರಿಗೆ ಪ್ರತಿಭಾ ಅಭಿನಂದನಾ ಕಾರ್ಯಕ್ರಮವು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಮೇ.7ರಂದು ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಅವರು ವಹಿಸಿ ವಿದ್ಯಾರ್ಥಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಮಾತುಗಳನ್ನು ಆಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕೃಷ್ಣ ಪಟ್ಟೆ ವಿದ್ಯಾಸಂಸ್ಥೆಗಳ ಸದಸ್ಯ ಗಣರಾಜ ಕುಂಬ್ಳೆ, ಪ್ರತಿಭಾ ಪ್ರೌಢಶಾಲೆಯ ಪೋಷಕ ಸಮಿತಿ ಅಧ್ಯಕ್ಷ ಲಿಂಗಪ್ಪಗೌಡ, ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರು ಸುಮನ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆ ಮುಖ್ಯ ಗುರು ರಾಜಗೋಪಾಲ್ ಉಪಸ್ಥಿತರಿದ್ದರು.

2024 25 ನೇ ಸಾಲಿನಲ್ಲಿ ನೂರು ಶೇಕಡಾ ಫಲಿತಾಂಶ ತಂದ ವಿದ್ಯಾರ್ಥಿಗಳಿಗೆ ಹಾಗೂ ಸಹಕರಿಸಿದ ಗುರುಗಳಿಗೆ ಕಿರು ಕಾಣಿಕೆ ಕೊಟ್ಟು ಗೌರವಿಸಿದರು. ಒಟ್ಟು 33 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ಹಾಗೂ ಮೂರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣಗೊಂಡು ಸಂಸ್ಥೆಗೆ ನೂರು ಶೇಕಡ ಫಲಿತಾಂಶವನ್ನು ತಂದುಕೊಟ್ಟಿದ್ದಾರೆ.

10ನೇ ತರಗತಿಯ ವಿದ್ಯಾರ್ಥಿಗಳಾದ ರಶ್ಮಿತಾ ಕುಮಾರಿ, ದಿಶಾ. ಜೆ.ರೈ, ಕಾರ್ತಿಕ್, ತನುಶ್ರೀ ರೈ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶಾಲಾ ಮುಖ್ಯ ಗುರು ಸುಮನಾ. ಬಿ ಅವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ರವರು ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಭವಿತಾ ವಂದಿಸಿದರು. ಪ್ರೌಢಶಾಲಾ ಶಿಕ್ಷಕ ವಿಶ್ವನಾಥ್ ಗೌಡ ಬೊಳ್ಳಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here