ಭಾರತೀಯ ಸೇನೆಗೆ ಒಳಿತಾಗಲೆಂದು ಷಣ್ಮುಖದೇವ ದೇವಸ್ಥಾನದಲ್ಲಿ ಬಿಜೆಪಿ ಶಕ್ತಿಕೇಂದ್ರದಿಂದ ಪ್ರಾರ್ಥನೆ

0

ಕೊಳ್ತಿಗೆ:ಬಿಜೆಪಿ ಶಕ್ತಿಕೇಂದ್ರದಿಂದ ಭಾರತೀಯ ಸೇನೆಗೆ ಒಳಿತಾಗಲೆಂದು ಷಣ್ಮುಖ ದೇವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಅಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ, ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿದ್ದ 9 ಉಗ್ರರ ಅಡಗು ತಾಣಗಳನ್ನು ಧ್ವಂಸಗೊಳಿಸಿ, 90ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಮಾಡಲಾಗಿದ್ದು, ಈ ಹಿನ್ನಲೆ ದೇಶದ ಮೇಲೆ ಆಗುತ್ತಿರುವ ಉಗ್ರರ ದಾಳಿಯನ್ನು ಸಮರ್ಥವಾಗಿ ಎದುರಿಸಿ ಉಗ್ರ ನೆಲೆಗಳನ್ನು ದ್ವಂಸ ಮಾಡಿದ ಸೇನೆಗೆ ಇನ್ನಷ್ಟು ಆತ್ಮಸ್ಥೈರ್ಯ ಹಾಗೂ ಶಕ್ತಿ ಬರಲಿ ಎಂದು ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಬಿಜೆಪಿ ಶಕ್ತಿಕೇಂದ್ರ ಮತ್ತು ಗ್ರಾಮಸ್ಥರು ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here