





ಪುತ್ತೂರು: ಜಾಗದ ತಕರಾರಿಗೆ ಸಂಬಂಧಿಸಿದಂತೆ ಮಹಿಳೆಯೋರ್ವರಿಗೆ ಗುಪ್ತಾಂಗ ತೋರಿಸಿದ ಆರೋಪದಲ್ಲಿ ಗ್ರಾ.ಪಂ. ಉಪಾಧ್ಯಕ್ಷರೋರ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಪ್ರಕರಣದ ಆರೋಪಿಯಾಗಿದ್ದಾರೆ. ಮೇ 3ರಂದು ಮಧ್ಯಾಹ್ನದ ವೇಳೆ ನಾನು ತೋಟದಲ್ಲಿದ್ದ ಸಮಯ ನಮ್ಮ ಮನೆಗೆ ಬರುವ ರಸ್ತೆಯಲ್ಲಿ ಯಾರೋ ಕೆಲಸ ಮಾಡುತ್ತಿರುವ ಶಬ್ದ ಕೇಳಿ ಅಲ್ಲಿಗೆ ಹೋದಾಗ ಪದ್ಮನಾಭ ಸಪಲ್ಯ ರವರು ನಮ್ಮ ಮನೆಯ ರಸ್ತೆಗೆ ಗೇಟ್ ಅಳವಡಿಸುತ್ತಿದ್ದರು. ಇದನ್ನು ಕಂಡ ನಾನು ನನ್ನ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡಿದ್ದು ಅದನ್ನು ನೋಡಿದ ಪದ್ಮನಾಭ ಸಫಲ್ಯ ರವರು ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ.





ನಮ್ಮೊಳಗಿರುವ ರಸ್ತೆ ವಿಚಾರಕ್ಕೆ ಸಂಬಂಧಿಸಿ ಇರುವ ದ್ವೇಷವೇ ಘಟನೆಗೆ ಕಾರಣ ಎಂದು ಮಹಿಳೆ ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ರದ್ದು:
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಹಿನ್ನೆಲೆಯಲ್ಲಿ ಪದ್ಮನಾಭ ಸಪಲ್ಯರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಅದೇ ರೀತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೂ ಅವರಿಗೆ ರಾಜೀನಾಮೆ ನೀಡಲು ಸೂಚಿಸಲಾಗಿದೆ ಎಂದು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ರವರು ತಿಳಿಸಿದ್ದಾರೆ.










