ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

0

ಪುತ್ತೂರು: ಮಂಗಳೂರು ಸಿಸಿಬಿ ಪೊಲೀಸರು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳಾದ ಅಜರುದ್ದೀನ್, ಅಬ್ದುಲ್ ಖಾದರ್ ಮತ್ತು ನೌಷದ್‌ನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ 11 ಜನರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಬಂಧಿತ ಆರೋಪಿಗಳ ಪೈಕಿ ಕೆಲವರ ವಿರುದ್ಧ ಈ ಹಿಂದೆ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಆರೋಪಿಗಳ ಪೈಕಿ ಅಜರುದ್ದೀನ್ ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿದೆ. ಈತನು ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅಬ್ದುಲ್ ಖಾದರ್ ಎಂಬಾತನು ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ವೇಳೆ ಆರೋಪಿಗಳಿಗೆ ಸಹಕರಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನೋರ್ವ ಆರೋಪಿ ನೌಷಾದ್ ಎಂಬಾತನು ಇತರ ಆರೋಪಿಗಳ ಜೊತೆ ಕೊಲೆಗೆ ಸಂಚು ರೂಪಿಸಿದ್ದ. ಈತನು ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡುಬಿದಿರೆ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ದರೋಡೆಗೆ ಸಂಚು ಸಹಿತ 6 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಪೈಕಿ ಅಝರುದ್ದೀನ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇತರ ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಕೊಲೆ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here