ನಿಡ್ಪಳ್ಳಿ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಶ್ರೀ ವಿಷ್ಣುಮೂರ್ತಿ ದೇವಾಲಯ ಶ್ರೀ ಗೋಪಾಲ ಕ್ಷೇತ್ರ ಇರ್ದೆ ಇದರ ಆಶ್ರಯದಲ್ಲಿ ಜೂ.29 ರಂದು ನಡೆಯಲಿರುವ 21ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಮೇ.16 ರಂದು ದೇವಾಲಯದಲ್ಲಿ ನಡೆಯಿತು.
ಪೂಜಾ ಸಮಿತಿ ಅಧ್ಯಕ್ಷ ಪುರಂದರ ಗೌಡ, ಪೂಜಾ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ರೈ ಬೈಲಾಡಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಬೆಟ್ಟಂಪಾಡಿ ವಲಯ ಅಧ್ಯಕ್ಷ ಬಾಲಕೃಷ್ಣ,ಯನ್, ವಲಯ ಮೇಲ್ವಿಚಾರಕರಾದ ಸೋಹನ್.ಜಿ, ಅಜಲಡ್ಕ ಒಕ್ಕೂಟದ ಅಧ್ಯಕ್ಷ ಚನಿಯಪ್ಪ ನಾಯ್ಕ, ಗುಮ್ಮಟಗದ್ದೆ ಒಕ್ಕೂಟದ ಅಧ್ಯಕ್ಷ ಹರೀಶ್ ಗೌಡ, ಪೂಜಾ ಸಮಿತಿ ಕಾರ್ಯದರ್ಶಿ ಮೋಹನ್ ಚಂದ್ರ, ಪದಾಧಿಕಾರಿಗಳಾದ ವಿಜಯಲಕ್ಷ್ಮಿ ಎಸ್.ರೈ, ಶೇಷಮ್ಮ ಉಪ್ಪಳಿಗೆ,ದೂಮಡ್ಕ ಒಕ್ಕೂಟದ ಸೇವಾ ಪ್ರತಿನಿಧಿ ಲೀಲಾವತಿ ಕೆ, ಅಜ್ಜಿಕಲ್ಲು ಒಕ್ಕೂಟದ ಸೇವಾ ಪ್ರತಿನಿಧಿ ತ್ರಿವೇಣಿ ಪಲ್ಲತ್ತಾರು, ಉಪ್ಪಳಿಗೆ ಒಕ್ಕೂಟದ ಸೇವಾ ಪ್ರತಿನಿಧಿ ಭಾರತಿ ಉಪ್ಪಳಿಗೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.