ಪುತ್ತೂರು: ಹಲವು ಪ್ರಯೋಗ ಮತ್ತು ಪ್ರಥಮಗಳಲ್ಲಿ ಮುಂದಿರುವ ಪುತ್ತೂರಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಕಾಂಗ್ರೆಸ್ ಪಕ್ಷದ ಪ್ರಮುಖರಿಗೆ, ವಿವಿಧ ಸಮಿತಿಗಳ ಅಧ್ಯಕ್ಷರುಗಳಿಗೆ, ನಾಮನಿರ್ದೇಶಿತ ಸದಸ್ಯರುಗಳಿಗೆ ಪಕ್ಷದ ಚಟುವಟಿಕೆ ಮತ್ತು ವಿವಿಧ ರೀತಿಯ ಮಾರ್ಗದರ್ಶನ ನೀಡಲು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ.17ಕ್ಕೆ ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು.

ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರಾಗಿರುವ ವಿಧಾನಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರು ಉದ್ಘಾಟಿಸಿದರು.

ಈ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವಾರು ಮಂದಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಬಳಿಕ ಕಾರ್ಯಕಾರಿಣಿ ನಡೆಯಿತು.