ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರು ಮೇ.17ರಂದು ಭೇಟಿ ನೀಡಿದರು.
ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು ಶಾಲು ಹೊದಿಸಿ ಶ್ರೀದೇವಿಯ ಭಾವಚಿತ್ರ ನೀಡಿ ಸ್ವಾಗತಿಸಿದರು. ಬಳಿಕ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ , ದೇವಸ್ಥಾನದ ಆಡಳಿತ ಸಮಿತಿ ಗೌರವಾಧ್ಯಕ್ಷ ಎಸ್.ಆರ್ ರಂಗಮೂರ್ತಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕಂಪಲ, ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ದ.ಕ. ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಗುರುವಪ್ಪ ಪೂಜಾರಿ ದಲ್ಕಾಜೆಗುತ್ತು, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯದರ್ಶಿ ಪ್ರೀತಂ ಪೂಂಜ ಅಗ್ರಾಳ, ಪುಣಚ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಎಂ., ಗ್ರಾ.ಪಂ ಅಧ್ಯಕ್ಷೆ ಬೇಬಿ ಪಟಿಕಲ್ಲು, ಆಡಳಿತ ಸಮಿತಿಯ ಪ್ರ.ಕಾರ್ಯದರ್ಶಿ ಉದಯಕುಮಾರ್ ದಂಬೆ, ಜೊತೆ ಕಾರ್ಯದರ್ಶಿ ರಾಮಕೃಷ್ಣ ಮೂಡಂಬೈಲು ಉಪಸ್ಥಿತರಿದ್ದರು.