ನಿಡ್ಪಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ

0

ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತ್  ಅರಿವು ಕೇಂದ್ರದ ವತಿಯಿಂದ ನಡೆಯುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ದೀಪ ಬೆಳಗಿಸಿ ಉದ್ಘಾಟಿಸಿದರು. 

ನಂತರ ಅವರು ಮಾತನಾಡಿ, ಮಕ್ಕಳು ಪಂಚಾಯತ್ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಅಲ್ಲದೆ ಈ ಬೇಸಿಗೆ ಶಿಬಿರದಲ್ಲಿ ಹೆಚ್ಚಿನ ಮಕ್ಕಳು ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಹೇಳಿದರು.

ಪಂಚಾಯತ್ ಕಾರ್ಯದರ್ಶಿ ಶಿವರಾಮ.ಎಂ ಮಾತನಾಡಿ ಮಕ್ಕಳು ಈ ಶಿಬಿರರದಲ್ಲಿ ಸಕ್ರೀಯವಾಗಿ ತೊಡಗಿಸಿ ಕೊಳ್ಳ ಬೇಕೆಂದು ಹೇಳಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಧ್ಯಾಲಕ್ಷ್ಮಿ, ಪಂಚಾಯತ್ ಸದಸ್ಯರುಗಳಾದ ಅವಿನಾಶ್ ರೈ , ನಂದಿನಿ ಆರ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಅಂಗವಿಕಲ ಪುನರ್ವಸತಿ ಕಾರ್ಯಕರ್ತ ರಾಮಣ್ಣ, ಪಂಚಾಯತ್ ಸಿಬ್ಬಂದಿಗಳು ಹಾಗೂ ಮಕ್ಕಳು ಪಾಲ್ಗೊಂಡರು. 

 ಅರಿವು ಕೇಂದ್ರ ಮೇಲ್ವಿಚಾರಕಿ ಪವಿತ್ರ. ಜಿ ಕಾರ್ಯಕ್ರಮ ನಿರೂಪಿಸಿ ಮಕ್ಕಳಿಗೆ ಹಲವು ಚಟುವಟಿಕೆಗಳನ್ನು ನಡೆಸಿದರು. 

LEAVE A REPLY

Please enter your comment!
Please enter your name here