ಬೆಟ್ಟಂಪಾಡಿ: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವ, ಸನ್ಮಾನ ಸಮಾರಂಭ ಹಾಗೂ ಯಕ್ಷಗಾನ ಬಯಲಾಟ ಮೇ 24 ರಂದು ಪತ್ತನಾಜೆ ಜಾತ್ರೆಯ ಶುಭದಿನದಂದು ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ಬಿಲ್ವಶ್ರೀ ಸಭಾಂಗಣದಲ್ಲಿ ಜರಗಲಿದೆ.
ಬೆಳಿಗ್ಗೆ ಸಭಾ ಕಾರ್ಯಕ್ರಮವನ್ನು ಪೇರಲ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸೀತಾರಾಮ ಗೌಡ ಮಿತ್ತಡ್ಕ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಕೃಷಿ ಪ್ರಶಸ್ತಿ ಪುರಸ್ಕೃತ ಚಿನ್ನದ ಪದಕ ವಿಜೇತ ಕೃಷಿಕ ಕಡಮಜಲು ಸುಭಾಸ್ ರೈ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಕ್ಕುತ್ತಡಿ ದರ್ಬೆ ನೇತ್ರಾದಿ ಗರಡಿ ಶ್ರೀ ನಾಗಬಿರ್ಮೆರ್ ಕೋಟಿ ಚೆನ್ನಯ ಸನ್ನಿಧಾನದ ಮುಖ್ಯಸ್ಥ ಜಯರಾಮ ಪೂಜಾರಿ ಕುಕ್ಕುತ್ತಡಿ, ವಿಘ್ನೇಶ್ವರ ಅರ್ಥ್ಮೂವರ್ಸ್ ಮಾಲಕ ಸುರೇಶ್ ಕುಮಾರ್, ಯುವ ಉದ್ಯಮಿ ಯತೀಶ್ ನಾಕಪ್ಪಾಡಿ ಭಾಗವಹಿಸಲಿದ್ದಾರೆ.
ಸನ್ಮಾನ
ಇದೇ ವೇಳೆ ಮೂವರು ಯಕ್ಷ ಕಲಾವಿದರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ವಿಜಯಾ ಬ್ಯಾಂಕ್ ನಿವೃತ್ತ ಮುಖ್ಯ ಪ್ರಬಂಧಕ, ಹವ್ಯಾಸಿ ಯಕ್ಷಗಾನ ಕಲಾವಿದರ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ಯಕ್ಷಗಾನ ಕಲಾವಿದ ನರಸಿಂಹ ಸಿ.ಕೆ.,ಯಕ್ಷಗಾನ ಭಾಗವತರಾದ ಹರಿದಾಸ ರಾಮಚಂದ್ರ ಮಣಿಯಾಣಿ ಕಾಟುಕುಕ್ಕೆಯವರಿಗೆ ಸನ್ಮಾನ ನಡೆಯಲಿದೆ.
ಯಕ್ಷಗಾನ ಬಯಲಾಟ
ಮಧ್ಯಾಹ್ನ 1 ಗಂಟೆಯ ಬಳಿಕ ಸಂಘದ ಕಲಾವಿದರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ʻಅತಿಕಾಯ-ಇಂದ್ರಜಿತು-ವೀರಮಣಿ ಕಾಳಗʼ (ಹರಿಹರ ದರ್ಶನ) ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಐ. ಗೋಪಾಲಕೃಷ್ಣ ರಾವ್ ತಿಳಿಸಿದ್ದಾರೆ.