




ಪುತ್ತೂರು: ಜೂ.1 ರಂದು ಮಂಗಳೂರು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025, ರಾಷ್ಟ್ರೀಯ ಕಲಾ ಸಮ್ಮೇಳನದ ಅಮಂತ್ರಣ ಪತ್ರವನ್ನು ಮೇ 20 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪುತ್ತೂರು ಘಟಕದ ನಿಕಟಪೂರ್ವ ಅಧ್ಯಕ್ಷ ಜೈರಾಜ್ ಭಂಡಾರಿ ನೊಣಾಲು ಡಿಂಬ್ರಿರವರು ಪುತ್ತೂರು ತುಳುಕೂಟ, ಲಯನ್ಸ್ ಕ್ಲಬ್ ಹಾಗೂ ತುಳು ಅಪ್ಪೆಕೂಟ ಸಂಸ್ಥೆಗಳಿಗೆ ಹಸ್ತಾಂತರ ಮಾಡುವ ಮೂಲಕ, ಕಾರ್ಯಕ್ರಮಕ್ಕೆ ಆಹ್ವಾನಿಸಿದರು.



ಪುತ್ತೂರು ತುಳುಕೂಟದ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಪ್ರೇಮಲತಾ ರಾವ್, ಕಾರ್ಯದರ್ಶಿ ಅರವಿಂದ ಭಗವಾನ್ ರೈ, ತುಳು ಅಪ್ಪೆಕೂಟದ ಅಧ್ಯಕ್ಷೆ ಹರಿಣಾಕ್ಷಿ ಜೆ.ಶೆಟ್ಟಿ, ಕಾರ್ಯದರ್ಶಿ ಶ್ರೀಶಾವಾಸವಿ ತುಳುನಾಡ್ ಮತ್ತು ಮೂರು ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಪ್ರೋ ದತ್ತಾತ್ರೇಯ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು













