ಬೆಳ್ಳಾರೆ: ಪೊಲೀಸರಿಂದ ಮನೆಗಳಿಗೆ ಭೇಟಿ ನೀಡಿ ಛಾಯಾಚಿತ್ರ ನಿಲ್ಲಿಸುವಂತೆ ಮಹಿಳಾ ಮೋರ್ಚಾದಿಂದ ಮನವಿ

0

ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ರಾತ್ರಿ ಹೊತ್ತಿನಲ್ಲಿ ಮನೆಗಳಿಗೆ ಭೇಟಿ ನೀಡಿ ಛಾಯಾಚಿತ್ರಗಳನ್ನು ತೆಗೆದು ಜಿಪಿಎಸ್ ದಾಖಲಿಸಿಕೊಂಡು ಹೋಗುವ ಮೂಲಕ ಭಯ ಮತ್ತು ಆತಂಕ ನಿರ್ಮಾಣವಾಗಿದೆ. ಅಲ್ಲದೇ ಖಾಸಗಿ ಜೀವನಕ್ಕೆ ತೊಂದರೆ ಉಂಟು ಮಾಡುತ್ತಿದ್ದಾರೆ. ಕೂಡಲೇ ಈ ಕೆಲಸವನ್ನು ನಿಲ್ಲಿಸಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಕುಟ್ರುಪ್ಪಾಡಿ ಮತ್ತು ಬೆಳ್ಳಾರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಹಿಳೆಯರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮನವಿ ನೀಡಿದರು.

ಈ ಸಂದರ್ಭ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ ಕೆ ,ಮುರುಳ್ಯ ಗ್ರಾ.ಪಂ.ಅಧ್ಯಕ್ಷೆ ವನಿತಾ ಸುವರ್ಣ, ಉಪಾಧ್ಯಕ್ಷೆ ಜಾನಕಿ ಮುರುಳ್ಯ, ಸಂಧ್ಯಾ ಯತೀಶ್,   ಸವಣೂರು ಗ್ರಾ.ಪಂ.ಅಧ್ಯಕ್ಷೆ  ಸುಂದರಿ ಬಿ ಎಸ್, ಸದಸ್ಯೆ ಚಂದ್ರಾವತಿ ಸುಣ್ಣಾಜೆ, ಮಹಿಳಾ ಮೋರ್ಚಾ ಕಾರ್ಯದರ್ಶಿ ಆಶಾ ರೈ ಕಲಾಯಿ, ಶೀಲಾವತಿ ಗೋಳ್ತಿಲ, ಕರುಣಾಕರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here