ನಿಶಿ ಎನ್ ಇವರಿಂದ ನೃತ್ಯಾಂತರಂಗದಲ್ಲಿ ಭರತನಾಟ್ಯ

0

ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಗೃಹಮಾಲಿಕೆ ನೃತ್ಯಾಂತರಂಗದ 128ನೇ ಸರಣಿಯಲ್ಲಿ ಸಂಸ್ಥೆಯ ವಿದ್ಯಾರ್ಥಿನಿಯಾದ ನಿಶಿ ಎನ್. ಇವರ ಭರತನಾಟ್ಯ ಜನಮೆಚ್ಚುಗೆ ಪಡೆಯಿತು.

ಕಾರ್ಯಕ್ರಮದ ಹಿಮ್ಮೇಳದಲ್ಲಿ ನಟುವಾಂಗದಲ್ಲಿ ವಿದ್ವಾನ್ ದೀಪಕ್ ಕುಮಾರ್, ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಸುಳ್ಯ ಮತ್ತು ಕೊಳಲಿನಲ್ಲಿ ವಿದ್ವಾನ್ ಕೃಷ್ಣಗೋಪಾಲ್ ಪುಂಜಾಲಕಟ್ಟೆ ಸಹಕರಿಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಕೆ ನಿಶಿಗೆ ಶುಭಹಾರೈಸಿದರು. ನಿಶಿಯ ಹೆತ್ತವರಾದ ಜ್ಯೋತಿ ಮತ್ತು ನೀಲಂತ್ ಕುಮಾರ್ ಕಾರ್ಯಕ್ರಮವನ್ನು ವ್ಯವಸ್ಥೆ ಮಾಡಿದ್ದರು.

LEAVE A REPLY

Please enter your comment!
Please enter your name here