





ಉಪ್ಪಿನಂಗಡಿ: ಸಹಕಾರ ಭಾರತಿಯ ಜಿಲ್ಲಾ ಸ್ತರದ ಬೈಠಕ್ನ ಹಿನ್ನೆಲೆಯಲ್ಲಿ ಇಲ್ಲಿಗೆ ಆಗಮಿಸಿದ ರಾಜ್ಯ ಹಾಗೂ ಜಿಲ್ಲಾ ಸ್ತರದ ಪದಾಧಿಕಾರಿಗಳು ಉಪ್ಪಿನಂಗಡಿಯ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಭೇಟಿ ನೀಡಿ ಸಂಘದ ವ್ಯವಹಾರದ ಬಗ್ಗೆ ವಿಚಾರ ವಿಮರ್ಷೆ ನಡೆಸಿದರು.
ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ದಡ್ಡು ಸಹಕಾರ ಭಾರತಿಯ ಪದಾಧಿಕಾರಿಗಳನ್ನು ಸ್ವಾಗತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ರಾಜ್ಯ ಸಹಕಾರ್ಯದರ್ಶಿ ಗಣೇಶ್ ಶೆಣೈ, ಜಿಲ್ಲಾ ಅಧ್ಯಕ್ಷ ಸುಧಾಕರ ರೈ, ಜಿಲ್ಲಾ ಉಪಾಧ್ಯಕ್ಷ ಕೆ.ವಿ. ಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಮಂಗಳೂರು ಮಹಾನಗರ ಅಧ್ಯಕ್ಷ ಜಿ.ಆರ್. ಪ್ರಸಾದ್, ಜಿಲ್ಲಾ ಮಹಿಳಾ ಪ್ರಮುಖ್ ಸುಭದ್ರಾ ರಾವ್, ಬೆಳ್ತಂಗಡಿ ತಾಲೂಕು ಅಧ್ಯಕ್ಷ ವೆಂಕಪ್ಪಯ್ಯ, ಮೂಡಬಿದ್ರೆ ತಾಲೂಕು ಅಧ್ಯಕ್ಷ ದಯಾನಂದ ಪೈ, ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಮೋಹನ್ ಪಕ್ಕಳ, ಕಡಬ ತಾಲೂಕು ಪ್ರಧಾನ ಕಾರ್ಯದರ್ಶಿ ಭರತ್ ನೆಕ್ಕರಾಜೆ, ಬೆಳ್ತಂಗಡಿ ತಾಲೂಕು ಮಹಿಳಾ ಪ್ರಮುಖ್ ಭಾರತಿ, ಹೋಪ್ ಕೋಮ್ಸ್ನ ನಿರ್ದೇಶಕ ಪ್ರಶಾಂತ್ ಗಟ್ಟಿ, ಪ್ರಮುಖರಾದ ಪದ್ಮನಾಭ ಅರ್ಕಜೆ, ರಾಘವೇಂದ್ರ ಭಂಡಾರ್ಕರ್ ಉಪಸ್ಥಿತರಿದ್ದರು.










