ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಕೆಡೆಂಬೇಲು ನಿವಾಸಿ ಜಯಾನಂದ ಶೆಟ್ಟಿ ಅವರ ಮಗ ಚೇತನ್ ಶೆಟ್ಟಿ (21ವ.) ಅವರು ಜೂ.8ರಂದು ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಮೃತಪಟ್ಟ ಯುವಕನ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿ, ಸರಕಾರದಿಂದ ಪರಿಹಾರ ದೊರಕಿಸಿ ಕೊಡುವ ಬಗ್ಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ಬಿಜೆಪಿ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ, ಜಿ.ಪಂ.ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ನೆಲ್ಯಾಡಿ ಗ್ರಾ.ಪಂ.ಸದಸ್ಯ ರವಿಪ್ರಸಾದ್ ಶೆಟ್ಟಿ, ಬಿಜೆಪಿ ಇಚ್ಲಂಪಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಿವ್ಯೇಶ್ ಕಲ್ಯ ಮೊದಲಾದವರು ಉಪಸ್ಥಿತರಿದ್ದರು.