





ನೆಲ್ಯಾಡಿ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಸಂರಕ್ಷಣಾ ಸಮಿತಿ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಆಯ್ಕೆಯಾಗಿದ್ದಾರೆ.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ಜೂ.13ರಂದು ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಪ್ರಸ್ತುತ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿರುವ ಸುಬ್ರಹ್ಮಣ್ಯ ಶಬರಾಯ ಅವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ ಪ್ರಶಾಂತ ರೈ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಸುಬ್ರಹ್ಮಣ್ಯ ಶಬರಾಯ ಅವರನ್ನು ಗೌರವ ಸಲಹೆಗಾರರನ್ನಾಗಿ ಆಯ್ಕೆ ಮಾಡಲಾಗಿದೆ.





ಗೋಳಿತ್ತೊಟ್ಟು ಗ್ರಾಮದ ಅರಂತಬೈಲು ನಿವಾಸಿ, ಕೃಷಿಕ ಕುಟುಂಬದವರಾದ ಪ್ರಶಾಂತ ರೈ ಅವರು ಈ ಹಿಂದೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದರು. ಪ್ರಸ್ತುತ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಸಂರಕ್ಷಣಾ ಸಮಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಶಾಂತ ರೈ ಅವರು ಸೌತಡ್ಕ ದೇಗುಲದ ಅಭಿವೃದ್ದಿಗೆ ನಿರಂತರ ಶ್ರಮಿಸುತ್ತಿದ್ದರು. ದೇವಸ್ಥಾನದ ಬಳಕೆಗಾಗಿ 20 ವರ್ಷದ ಹಿಂದೆ ಖರೀದಿಸಲಾಗಿದ್ದ ಜಮೀನನ್ನು ಖಾಸಗಿ ಟ್ರಸ್ಟ್ ಸ್ವಾಧೀನ ಮಾಡಿಕೊಂಡಿದ್ದು, ಇದನ್ನು ಮರಳಿ ದೇಗುಲಕ್ಕೇ ಸಿಗುವಂತೆ ಮಾಡಬೇಕೆಂಬ ನಿಟ್ಟಿನಲ್ಲಿ ಪ್ರಶಾಂತ್ ರೈ ಅವರು ಮುಂಚೂಣಿಯಲ್ಲಿ ನಿಂತು ಶ್ರಮಿಸಿದ್ದರು.


            







