ಬೊಬ್ಬೆಕೇರಿ ಶಾಲೆಯಲ್ಲಿ ಪೋಷಕರ ಸಭೆ- ಅಡುಗೆ ಸಿಬ್ಬಂದಿ ಶಶಿಕಲಾ ಅವರಿಗೆ ಬೀಳ್ಕೊಡುಗೆ

0

ಕಾಣಿಯೂರು: ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲೆಯಲ್ಲಿ ಪೋಷಕರ ಸಭೆ ಮತ್ತು ಸ್ವಯಂ ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿ ಶಶಿಕಲಾ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜೂ.14ರಂದು ನಡೆಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಸುನೀತಾ ಗಣೇಶ್ ಅಧ್ಯಕ್ಷತೆ ವಹಿಸಿದ್ದರು.

ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯೆ ಸುನಂದಾ ಅಬ್ಬಡ, ಕಾಣಿಯೂರು ಕ್ಲಸ್ಟರ್ ಸಿ ಆರ್ ಪಿ ಯಶೋದ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ ಹಾಗೂ ಎಸ್. ಡಿ.ಎಂ.ಸಿ ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಬೊಬ್ಬೆಕೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಭವಾನಿ, ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸುಕುಮಾರ್ ಕಲ್ಪಡ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಶಶಿಕಲಾ ಸ್ವಾಗತಿಸಿ, ಶಿಕ್ಷಕ ಜನಾರ್ದನ ಹೇಮಳ ವಂದಿಸಿದರು

LEAVE A REPLY

Please enter your comment!
Please enter your name here