ಪುತ್ತೂರು: 110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.17 ರಂದು ಪೂರ್ವಾಹ್ನ 10:00 ರಿಂದ ಸಾಯಂಕಾಲ 3:00 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು ಬೆಳ್ಳಾರೆ-ಗುತ್ತಿಗಾರು, 33ಕೆವಿ ಮಾಡಾವು-ಕಾವು ಮತ್ತು 33ಕೆವಿ ಮಾಡಾವು – ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಮಾಡಾವು ಹಾಗೂ 33/11ಕೆವಿ ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.