ಶಾಸಕ ಅಶೋಕ್ ರೈ ಹಾರೆ ಹಿಡಿದು ಶ್ರಮದಾನ ವಿಡಿಯೋ 2 ದಿನದಲ್ಲಿ 98 ಲಕ್ಷಕ್ಕೂ ಅಧಿಕ ವೀಕ್ಷಣೆ

0

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಹಾರೆ ಹಿಡಿದು ಚರಂಡಿ ಸ್ವಚ್ಛ ಮಾಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದ್ದು, 2 ದಿನದಲ್ಲಿ 98 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿ ಶಾಸಕರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಜೂ.15ರಂದು ಅವರು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ಮಳೆ ನೀರು ಚರಂಡಿಯಲ್ಲಿ ಹರಿಯುವಲ್ಲಿ ಹಾರೆ ಹಿಡಿದು ತಾನೇ ಚರಂಡಿ ಸ್ವಚ್ಛಗೊಳಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋವನ್ನು ಇದೀಗ 98 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here