ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪುತ್ತೂರು:ಶತಮಾನದತ್ತ ದಾಪುಗಾಲಿಡುತ್ತಿರುವ ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆಯು ನೆರವೇರಿತು.


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ವಿನಯ ಸುವರ್ಣ ದೀಪ ಬೆಳಗಿಸಿ ವಿಶ್ವ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು.

ಶಾಲಾ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್ ಹಾಗೂ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಾಲಾ ನಾಯಕ ಆಕಾಶ್ ಡಿ ಯೋಗ ಪ್ರತಿಜ್ಞೆ ಭೋಧಿಸಿ, ಶಿಕ್ಷಕಿ ಭವ್ಯ ವಂದಿಸಿದರು. ಸುಮಾರು 300 ಮಕ್ಕಳ ಯೋಗ ಪ್ರದರ್ಶನ ಎಲ್ಲರ ಗಮನ ಸೆಲೆಯಿತು.

LEAVE A REPLY

Please enter your comment!
Please enter your name here