ಪುತ್ತೂರು: ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.21ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಮುಖ್ಯೋಪಾಧ್ಯಾಯನಿ ಭಗಿನಿ ಅನಿತಾರವರ ಮಾರ್ಗದರ್ಶನದಲ್ಲಿ ಆಚರಿಸಲಾಯಿತು. ಶಾಲೆಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ಯೋಗಾಸನಗಳನ್ನು ಪ್ರದರ್ಶಿಸಿದರು.

ಶಾಲೆಯ ದೈಹಿಕ ಶಿಕ್ಷಕ ನಿರಂಜನ್ ಮತ್ತು ಅಕ್ಷಯ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಯೋಗಾಸನಗಳ ಮಹತ್ವ, ಅವುಗಳಿಂದ ದೊರೆಯುವ ದೈಹಿಕ ಮತ್ತು ಮಾನಸಿಕ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.