





ಕಡಬ: ಗುಡ್ ಶೆಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮರ್ದಾಳದಲ್ಲಿ 11ನೇ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.


ಮುಖ್ಯ ಶಿಕ್ಷಕಿ ಪ್ರಿಯಾ ಕುಮಾರಿ ಸಿ ಟಿ.ಯವರು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆಯನ್ನು ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರ ವೇಣು ,ಶಿಕ್ಷಕಿ ಲೀನಾ ಹಾಗೂ ಶಿಕ್ಷಕಿ ಶ್ರೀಮತಿ ಶ್ರೀಲತಾ ರವರ ಮುಂದಾಳುತ್ವದಲ್ಲಿ ನಡೆಸಲಾಯಿತು. ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.














