ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂ.21ರಂದು ನಡೆಯಿತು. ಶಿಕ್ಷಕರಾದ ಜನಾರ್ದನ ಹೇಮಳ ಹಾಗೂ ಯೋಗದಲ್ಲಿ ರಾಷ್ಟ್ರಮಟ್ಟದಲ್ಲಿ 6ನೇ ಸ್ಥಾನ ಗಳಿಸಿರುವ 7ನೇ ತರಗತಿ ವಿದ್ಯಾರ್ಥಿನಿ ಛಾಯಾ ಜಿ ಎನ್ ನೇತೃತ್ವದಲ್ಲಿ ವಿವಿಧ ಯೋಗಾಸನಗಳನ್ನು ನಡೆಸಿಕೊಟ್ಟರು. ಶಾಲಾ ಮುಖ್ಯಗುರು ಶಶಿಕಲಾ, ಶಿಕ್ಷಕರಾದ ಗೀತಾ ಕುಮಾರಿ, ಶೋಭಿತಾ, ಸುರೇಖಾ, ಶೃತಿ, ದಿವ್ಯಾ, ಜಯಲತಾ, ಸುಶ್ಮಿತಾ ಸಹಕರಿಸಿದರು.
