ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಜೀಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ಮುಖ್ಯ ಶಿಕ್ಷಕಿ ದೀಪಿಕಾ ಚಾಕೋಟೆ ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ನೆಟ್ಟಾರ್ ಮತ್ತು ಶಿಕ್ಷಕಿ ಉಷಾ ಇವರು ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿದರು.

ವೇದಿಕೆಯಲ್ಲಿ ಕಾರ್ಯಕ್ರಮ ಸಂಘಟಕರಾದ ಉಮೇಶ್ ನಾಯ್ಕ ಮತ್ತು ಅನ್ಸಿಲಾ ರೋಶನಿ ಮೊಂತೆರೊ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಶಿಕ್ಷಕರಾದ ಹೇಮಲತಾ ಕಜೆಗದ್ದೆ, ಕೃಷ್ಣಪ್ರಸಾದ್, ಪ್ರದೀಪ್ ಕುಮಾರ್ ಎ ಆರ್, ಶರ್ಮಿಳ ಎಂ, ತ್ರಿವೇಣಿ, ಚಂದ್ರಮೋಹನ್ ಉಪಸ್ಥಿತರಿದ್ದು ಯೋಗ ಅಭ್ಯಾಸವನ್ನು ಮಾಡಿದರು.

ಕಾರ್ಯಕ್ರಮವನ್ನು ಹೇಮಲತಾ ಕಜೆಗದ್ದೆ ನಿರೂಪಿಸಿ, ಶೈಕ್ಷಣಿಕ ಸಲಹೆಗಾರ ಕೃಷ್ಣ ಪ್ರಸಾದ್ ವಂದಿಸಿದರು.

LEAVE A REPLY

Please enter your comment!
Please enter your name here